ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಜೂನ್ 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಜೂನ್ 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಜೂನ್ 8 ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿತ್ತು. ಈಗ ಭಾನುವಾರ (ಜೂನ್ 9) ಸಂಜೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಜವಾಹರಲಾಲ್ ನೆಹರು ಬಳಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ. ಉಳಿದಂತೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೇರಿಂಗ್ ಟೋಬಗೇ, ಮಾರಿಷಿಸ್‌ನ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್‌ಗೆ ಆಮಂತ್ರಣ ನೀಡಲಾಗಿದೆ.