HEALTH TIPS

ಅರುಣಾಚಲ ಪ್ರದೇಶ | 8ನೇ ತರಗತಿ ವಿದ್ಯಾರ್ಥಿಗಳಿಗೆ ಥಳಿತ: ಐವರ ಅಮಾನತು

         ಟಾನಗರ: ಅರುಣಾಚಲ ಪ್ರದೇಶದ ಚಾಂಗ್‌ಲಾಂಗ್‌ ಜಿಲ್ಲೆಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ(ಜೆಎನ್‌ವಿ) ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಗಳು 15 ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

           ಮಂಗಳವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ ಪಾತ್ರವಿದೆ ಎನ್ನಲಾದ ಐವರು ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲ ರಾಜೀವ್‌ ರಂಜನ್‌ ತಿಳಿಸಿದ್ದಾರೆ.

              ಬೋರ್‌ದುಮ್ಸಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದ ಹಾಸ್ಟೆಲ್‌ನಲ್ಲಿ 11ನೇ ತರಗತಿಯ ವಿದ್ಯಾರ್ಥಿಗಳು 8ನೇ ತರಗತಿಯ ವಿದ್ಯಾರ್ಥಿಗಳನ್ನು ಬಡಿಗೆಗಳಿಂದ ಥಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಚಾಂಗ್‌ಲಾಂಗ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries