ಕಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮೂವರು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮೂವರು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಗುಲ್ಮಿ ಜಿಲ್ಲೆಯ ಮಲಿಕಾ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬ ಐವರು ಮೃತಪಟ್ಟಿದ್ದಾರೆ.
ನೆರೆಯ ಸಯಾಂಗ್ಜಾ ಜಿಲ್ಲೆಯಲ್ಲಿ ಒಬ್ಬ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ. ಮತ್ತೊಂದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಭಟ್ಟಾರೈ ಹೇಳಿದ್ದಾರೆ.
ಈ ವರ್ಷದ ಮುಂಗಾರು ಮಳೆ ಪ್ರಾರಂಭವಾದಾಗಿನಿಂದಲೂ ಮಳೆ, ಭೂಕುಸಿತ ಸಂಬಂಧಿತ ಅವಘಡಗಳಲ್ಲಿ ಈವರೆಗೂ 35ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.