ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಎಐಎಡಿಎಂಕೆ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ವಿಧಾನಸಭೆ ಅಧಿವೇಶನದಿಂದ ಅಮಾನತುಗೊಂಡಿರುವ ಎಐಎಡಿಎಂಕೆ ಶಾಸಕರು ಕಪ್ಪು ಅಂಗಿ ಧರಿಸಿ, ರಾಜರತ್ನಂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
ವಿಷಯುಕ್ತ ಮದ್ಯ ಸೇವಿಸಿ 60ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದ ಬಗ್ಗೆ ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತಾಪಿಸಲು ಅನುಮತಿ ನಿರಾಕರಿಸಿ, ಎಐಎಡಿಎಂಕೆ ಶಾಸಕರನ್ನು ಅಮಾನತುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.