HEALTH TIPS

ಕೇರದಳಲ್ಲಿ ಕೊನೆಗೂ ಖಾತೆ ತೆರೆದ BJP, ತ್ರಿಶೂರ್ ನಲ್ಲಿ ಸುರೇಶ್ ಗೋಪಿ ಭರ್ಜರಿ ಜಯ!

            ತಿರುವನಂತಪುರಂ: ಕೊನೆಗೂ ಕೇರಳದಲ್ಲಿ ಖಾತೆ ತೆರೆಯುವ ಬಿಜೆಪಿ ಕನಸು ನನಸಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

         ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದ್ದು, ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ (Suresh Gopi) ಜಯ ಗಳಿಸಿದ್ದಾರೆ. ಸುರೇಶ್ ಗೋಪಿ ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

            ಸುರೇಶ್ ಗೋಪಿ ಬರೊಬ್ಬರಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಇದು ಕೇರಳದಲ್ಲಿ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

          ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries