ಬದಿಯಡ್ಕ: ಕಾಸರಗೋಡು ರಾಜ್ಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾ ಘಟಕ ನೇತೃತ್ವದಲ್ಲಿ ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಜು.1ರಂದು ಬೆಳಗ್ಗೆ 9.30ಕ್ಕೆ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾ„ಕಾರದ ಸದಸ್ಯ, ಕೆಯುಡಬ್ಲ್ಯೂಜೆ ಕಾಸರಗೋಡು ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಉದ್ಘಾಟಿಸುವರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಹಿರಿಯ ಭಾಷಾ ತಜ್ಞ, ಸಂಶೋಧಕ ಡಾ. ಬೇ.ಸೀ. ಗೋಪಾಲಕೃಷ್ಣ ಭಟ್ ಪತ್ರಿಕಾ ದಿನಾಚರಣೆ ಸಂದೇಶ ನೀಡುವರು.
ಮುಖ್ಯ ಅತಿಥಿಯಾಗಿ ಶಾಲಾ ಪ್ರಬಂಧಕ ಜಯಪ್ರಕಾಶ್ ಪಜಿಲ, ಮುಖ್ಯಶಿಕ್ಷಕ ಸತ್ಯನಾರಾಯಣ ಶರ್ಮಾ, ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಖಂ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ್ ಯಾದವ್, ಉಪಾಧ್ಯಕ್ಷ ಪುರುಷೋತ್ತಮ ಪೆರ್ಲ, ಪತ್ರಕರ್ತರು, ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕರು ಭಾಗವಹಿಸುವರು.