HEALTH TIPS

ಪ್ರಮಾಣವಚನ: ಭಾರತದ ಆಹ್ವಾನ ಸ್ವೀಕರಿಸಿದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು

          ಮಾಲೆ: ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

           'ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಸಂಬಂಧಿಸಿದ ಆಹ್ವಾನವನ್ನು ಮುಯಿಜು ಸ್ವೀಕರಿಸಿದ್ದಾರೆ.

ಸರ್ಕಾರದ ಇತರ ಕೆಲವು ಹಿರಿಯ ಅಧಿಕಾರಿಗಳೊಂದಿಗೆ ಅವರು ಶನಿವಾರ ನವದೆಹಲಿಗೆ ಪ್ರಯಾಣಿಸಲಿದ್ದಾರೆ' ಎಂದು ಎಡಿಷನ್‌ ಡಾಟ್ ಎಂವಿ ವೆಬ್‌ಸೈಟ್‌ ವರದಿ ತಿಳಿಸಿದೆ.

             ಆದರೆ ಭಾನುವಾರ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಮುಯಿಜು ಅವರ ಕಚೇರಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

             ಕಳೆದ ವರ್ಷದ ನವೆಂಬರ್‌ನಲ್ಲಿ ಮುಯಿಜು ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾಲ್ದೀವ್ಸ್‌ ಮತ್ತು ಭಾರತದ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಬಿಕ್ಕಟ್ಟು ತಲೆದೋರಿತ್ತು.

              ಪ್ರಚಂಡ ಭಾಗಿ (ಕಾಠ್ಮಂಡು ವರದಿ): ನೇಪಾಳ ಪ್ರಧಾನ ಮಂತ್ರಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಪ್ರಮಾಣವಚಣ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries