ಕುಂಬಳೆ : ಬಿಜೆಪಿ ಕುಂಬಳೆ ಮಂಡಲ ಸಮಿತಿ ಆಶ್ರಯದಲ್ಲಿ ಕುಂಬಳೆ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ ಸಮಾರಂಭ ಉದ್ಘಾಟಿಸಿದರು.
ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಅನಂತಪುರ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಕ್ಯಾಪ್ಟನ್ ಕೆ ಎ ಪಿಳ್ಳೆ ಅವರು ಯೋಗ ಹಾಗೂ ಅರೋಗ್ಯದ ಕುರಿತು ಮಾಹಿತಿ ನೀಡಿದರು. ಯೋಗ ಪಟು ಸಂಜೀವ ಭಂಡಾರಿ ಕಂಚಿಕಟ್ಟೆ ಅವರು ಯೋಗದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯರಾದ ವಿ ರವೀಂದ್ರನ್, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಕೋಳಾರು ಸತೀಶ್ಚಂದ್ರ ಭಂಡಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಸಂತಕುಮಾರ್ ಮಯ್ಯ ಸ್ವಾಗತಿಸಿದರು. ಅನಿಲ್ ಕುಮಾರ್ ಮಣಿಯುಂಪಾರೆ ವಂದಿಸಿದರು.