ನವದೆಹಲಿ: 'ಪಂಜಾಬ್ ಬಳಿ ಸಂಭವಿಸಿದ್ದ ಗೂಡ್ಸ್ ರೈಲು ಡಿಕ್ಕಿ ಪ್ರಕರಣದಲ್ಲಿ ಲೋಕೊ ಪೈಲೆಟ್ ಹಾಗೂ ಸಹಾಯಕ ಇಬ್ಬರೂ ನಿದ್ರೆಗೆ ಜಾರಿದ್ದರಿಂದ ಕೆಂಪು ದೀಪ ಮೂಡಿದಾಗ ಬ್ರೇಕ್ ಹಾಕದ ಕಾರಣ ಅಪಘಾತ ಸಂಭವಿಸಿದೆ' ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

'ಜೂನ್ 2ರಂದು ನಸುಕಿನ 3.15ರ ಹೊತ್ತಿಗೆ ಪಂಜಾಬ್‌ನ ಸಾಧೂಗಡ್ ರೈಲ್ವೆ ನಿಲ್ದಾಣದ ಬಳಿಯ ಸಿರ್‌ಹಿಂದ್ ಜಂಕ್ಷನ್‌ನಲ್ಲಿ ಜಿವಿಜಿಎನ್ ಗೂಡ್ಸ್ ರೈಲು ಹಳಿ ತಪ್ಪಿ, ಪಕ್ಕದ ಪ್ರಯಾಣಿಕ ರೈಲು ಮಾರ್ಗದ ಮೇಲೆ ಬಿದ್ದಿತ್ತು.
'ಈ ಕ್ರಾಸಿಂಗ್‌ನಲ್ಲಿ ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಜಮ್ಮು ತಾವಿ ಬೇಸಿಗೆ ವಿಶೇಷ ರೈಲು ಹಳದಿ ದೀಪ ಉರಿಯುತ್ತಿದ್ದುದರಿಂದ ಪ್ರತಿ ಗಂಟೆಗೆ 46 ಕಿ.ಮೀ.ರಷ್ಟು ಕಡಿಮೆ ವೇಗದಲ್ಲಿ ಸಾಗುತ್ತಿತ್ತು. ರೈಲ್ವೆಯಲ್ಲಿ ಹಳದಿ ಬಣ್ಣದ ದೀಪ ಉರಿಯುತ್ತಿದೆ ಎಂದರೆ ಮುಂದೆ ಕೆಂಪು ದೀಪ ಹೊತ್ತಿಕೊಳ್ಳಲಿದೆ ಹಾಗೂ ರೈಲಿನ ವೇಗವನ್ನು ತಗ್ಗಿಸಬೇಕು ಎಂಬುದು ಲೊಕೊ ಪೈಲೆಟ್‌ಗೆ ನೀಡುವ ಸಂದೇಶವಾಗಿದೆ' ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ.