ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ದೋಡಾ ಜಿಲ್ಲೆಯ ಭದರ್ವಾ-ಪಠಾಣ್‌ಕೋಟ್ ಹೆದ್ದಾರಿಯ ಚಟರ್ಗಲ್ಲಾ ಪ್ರದೇಶದಲ್ಲಿರುವ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು ಯೋಧರು ಸೇರಿದಂತೆ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಮತ್ತೊಂದೆಡೆ ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಕಬೀರ್ ದಾಸ್ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,
ಇದೇ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಸೋಮವಾರ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ನಮ್ಮ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಉಗ್ರರ ಪತ್ತೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.