ಅರಾರಿಯಾ: ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗ ಕುಸಿದಿದೆ.
ಅರಾರಿಯಾ: ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗ ಕುಸಿದಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ರಾಜ್ಯಸರ್ಕಾರದಿಂದ ಹೊಸದಾಗಿ ಈ ಸೇತುವೆ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಇನ್ನೂ ಮುಕ್ತವಾಗಿರಲಿಲ್ಲ.
ಈ ಸೇತುವೆ ಅರಾರಿಯ ಜಿಲ್ಲೆಯ ಕುರ್ಸಾ ಕಾಂತ ಮತ್ತು ಸಿಕ್ತ್ಯ ಪ್ರದೇಶಗಳನ್ನು ಸಂಪರ್ಕಿಸುತ್ತಿತ್ತು.
ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು 'ಹೊಸದಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗ ಕುಸಿದಿದೆ. ಪರಿಶೀಲನೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ' ಎಂದರು.
'ನಿರ್ಮಾಣ ಸಂಸ್ಥೆಯ ಮಾಲೀಕನ ನಿರ್ಲಕ್ಷದಿಂದಾಗಿ ಸೇತುವೆ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದು ಸ್ಥಳೀಯ ಶಾಸಕಿ ವಿಜಯ ಕುಮಾರಿ ಎಎನ್‌ಐಗೆ ಪ್ರತಿಕ್ರಿಯಿಸಿದ್ದಾರೆ.