ಪೆರ್ಲ: ದೈಹಿಕ ಆರೋಗ್ಯ ಕಾಪಾಡುವುದರ ಜತೆಗೆ ಬೌದ್ಧಿಕ ವಿಕಾಸಕ್ಕೆ ಯೋಗ ಸಹಕಾರಿಯಾಗಿರುವುದಾಗಿ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಎನ್ ಕೇಶವ ಪ್ರಕಾಶ್ ತಿಳಿಸಿದ್ದಾರೆ. ಅವರು ಅಂತಾರಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದ ಯೋಗ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅದ್ಯಕ್ಷ ಪುರುಷೋತ್ತಮ ಬಿ.ಎಂ, ಶಾಲಾ ಶಿಕ್ಷಕ ಡಾ. ಸತೀಶ್ ಪುಣಿಂಚಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.