ಪೆರ್ಲ: ಪೆರ್ಲ ನಾಲಂದಾ ಕಾಲೇಜು ಎನ್ಬೆಸ್ಸೆಸ್ ಘಟಕ- 49, ನಾಲಂದ ಚಾರಿಟೇಬಲ್ ಟ್ರಸ್ಟ್, ಹಾಗೂ ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ನಾಲಂದ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಪೆರ್ಲ ವಿವೇಕಾನಂದ ಶಿಶು ಮಂದಿರದ ಅಧ್ಯಕ್ಷೆ ನಳಿನಿ ಸೈಪಂಗಲ್ಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತ ದೇಶ ಯೋಗದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಯೋಗ ಕೇವಲ ವ್ಯಾಯಾಮ ಮಾತ್ರವಲ್ಲ ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಲು ಹಾಗೂ ನಮ್ಮ ಮನದಲ್ಲಿರುವ ಕೆಟ್ಟದನ್ನು ದೂರ ಮಾಡಿ ಸದ್ವಿಚಾರಗಳನ್ನು ಹೆಚ್ಚಿಸಿಕೊಳ್ಳುವ ಪ್ರಕ್ರಿಯೆ ಎಂದರು.
ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, "ಯೋಗ ನಮಗಾಗಿ ಮಾತ್ರವಲ್ಲ ಸಮೂಹಕ್ಕಾಗಿ" ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಧ್ಯೇಯ ವಾಕ್ಯ ಎಂದು ತಿಳಿಸಿದರು.
ಯೋಗ ತರಬೇತಿದಾರ ಸೀತಾರಾಮ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಎನ್ನೆಸ್ಸೆಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಸಹಾಯಕ ಉಪನ್ಯಾಸಕ ಮನೋಜ್ ಕುಮಾರ್ ಪಿ.ಸ್ವಾಗತಿಸಿ, ಸ್ವಯಂಸೇವಕಿ ಶ್ರೀಜ ವಂದಿಸಿದರು. ಹರ್ಷಿತಾ ಸಂಯೋಜಿಸಿದರು. ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.