ಉಪ್ಪಳ: ಪೈವಳಿಕೆ ಸಮೀಪದ ಲಾಲ್‍ಬಾಗ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು
ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್ ಬಾಗ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ನಮ್ಮ ಊರಿನಲ್ಲಿ ಉದ್ಘಾಟನೆಗೊಂಡಿದ್ದು ಊರಿಗೆ ಹೆಮ್ಮೆ. ಶೌರ್ಯ ಸ್ವಯಂ ಸೇವಕರು ಉತ್ತಮ ಗುಣಮಟ್ಟದ ಸೇವೆಗಳನ್ನು ನೀಡುವಲ್ಲಿ ಮಾದರಿಯಾಗಲಿ ಎಂದು ಶುಭ ಹಾರೈಸಿದರು.
ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಕಾರ್ಯಕ್ರಮಗಳ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂ ಸೇವಕರಿಗೆ ಸಮವಸ್ತ್ರ ವಿತರಿಸಿದರು.
ಉಡುಪಿ-ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ, ಘಟಕ ಪ್ರತಿನಿಧಿ ಸುನಿಲ್ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಶಿವರಾಮ್ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಹೇಮಲತಾ ನಿರೂಪಿಸಿದರು.