ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಸಮೀಪ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ಪಡೆಯ ಮೇಲೆ ಶಂಕಿತ ಉಗ್ರರು ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಸಮೀಪ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ಪಡೆಯ ಮೇಲೆ ಶಂಕಿತ ಉಗ್ರರು ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಭದ್ರತಾ ಪಡೆಗಳ ವಾಹನಗಳ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿವೆ. ಕೋಟ್ಲೆನ್ ಗ್ರಾಮದ ಬಳಿ ಇನ್ನೂ ಗುಂಡಿನ ದಾಳಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ದೆಹಲಿಯಲ್ಲಿದ್ದು, ಇಂಫಾಲಗೆ ತಲುಪಿದ ನಂತರ ಜಿರಿಬಾಮ್‌ಗೆ ಭೇಟಿ ನೀಡಲು ಯೋಜಿಸಿದ್ದರು ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.