ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ಸುರಕ್ಷಿತ ವಾಹನಗಳ ತಯಾರಿಕೆಗೆ ಹೆಸರುವಾಸಿಯಾಗಿದೆ. ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ ಹಾಗೂ ನೆಕ್ಸಾನ್ ಇವಿಗಳನ್ನು ಮಾರಾಟಗೊಳಿಸುವ ಮೂಲಕ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿಯೂ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ.
ವಿನ್ಯಾಸ (ಡಿಸೈನ್): ಟಾಟಾ ಹ್ಯಾರಿಯರ್ ಇವಿ (Tata Harrier EV) ವಿನ್ಯಾಸವು ಬಹುತೇಕ ಇಂಧನ ಚಾಲಿತ ಮಾದರಿ (ಮಾಡೆಲ್)ಗೆ ಹೋಲಿಕೆಯಾಗಲಿದೆ. ಆದಾಗ್ಯೂ ನವೀನವಾದ ಅಲಾಯ್ ವೀಲ್‌ಗಳು ಮತ್ತು ಹೊಸದಾದ ಬಂಪರ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸೀವೀಡ್ ಗ್ರೀನ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಸಿಗಬಹುದು ಎನ್ನಲಾಗಿದೆ.
ವೈಶಿಷ್ಟ್ಯಗಳು: ಈ ಎಲೆಕ್ಟ್ರಿಕ್ ಕಾರು ದೊಡ್ಡದಾದ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ಸ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಆಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಪ್ಯಾನೆಲ್, 10-ಸ್ಪೀಕರ್ ಜೆಬಿಎಲ್ ಸೆಟಪ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಹಾಗೂ ಸನ್‌ರೂಫ್‌ನಂತಹ ವೈಶಿಷ್ಟ್ಯ (ಫೀಚರ್)ಗಳನ್ನು ಪಡೆದಿರುವ ನಿರೀಕ್ಷೆಯಿದೆ.
ಸುರಕ್ಷತಾ ವೈಶಿಷ್ಟ್ಯಗಳು: ನೂತನ ಟಾಟಾ ಹ್ಯಾರಿಯರ್ ಇವಿಯು ಅತಿಹೆಚ್ಚು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿರಲಿದೆ ಎನ್ನಲಾಗಿದೆ. ಅಪಾಯದ ಸಂದರ್ಭದಲ್ಲಿ ಪ್ರಯಾಣಿಕರ ಜೀವ ಉಳಿಸಲು 6-ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಕಾರ್ಯಕ್ಷಮತೆ: ಹೊಸ ಟಾಟಾ ಹ್ಯಾರಿಯರ್ ಇವಿಯು ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ (Battery Pack) ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೂ ಹೆಚ್ಚು ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಬಹುತೇಕ AWD (ಆಲ್ - ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರಬಹುದು ಎಂದು ತಿಳಿದುಬಂದಿದೆ.
ಬೆಲೆ & ಪ್ರತಿಸ್ಪರ್ಧಿ ಕಾರುಗಳು: ಇಂಧನ ಚಾಲಿತ ಮಾದರಿಗೆ ಹೋಲಿಸಿದರೆ ಹ್ಯಾರಿಯರ್ ಇವಿಯು ಕೊಂಚ ಅಧಿಕ ದರವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಸರಿ ಸುಮಾರು ರೂ.25 ಲಕ್ಷದಿಂದ ರೂ.35 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಈ ಕಾರಿಗೆ ಮುಂಬರುವ ತಿಂಗಳಲ್ಲಿ ಮಾರುಕಟ್ಟೆಗೆ ಬರಲಿರುವ ಮಹೀಂದ್ರಾ ಎಕ್ಸ್‌ಯುವಿ.ಇ9 ಮತ್ತು ಎಕ್ಸ್‌ಯುವಿ.ಇ8, ಹ್ಯುಂಡೈ ಕ್ರೆಟಾ ಇವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲಿವೆ.
ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಸಾಮಾನ್ಯ ಟಾಟಾ ಹ್ಯಾರಿಯರ್ (Tata Harrier) ಎಸ್‌ಯುವಿ ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕೇವಲ 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 14.60 ರಿಂದ 16.80 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.