ಪಾಲಕ್ಕಾಡ್: ಪಾಲಕ್ಕಾಡ್ ನಲ್ಲಿ ಯುಡಿಎಫ್ ಮತ್ತು ಎಲ್ ಡಿಎಫ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಘರ್ಷಣೆ ನಡೆದಿದೆ.
ಸಿಪಿಎಂ ಜಿಲ್ಲಾ ಸಮಿತಿ ಕಚೇರಿ ಎದುರು ಘರ್ಷಣೆ ನಡೆದಿದೆ. ಯುಡಿಎಫ್ ಕಚೇರಿ ಎದುರು ಪಟಾಕಿ ಸಿಡಿಸಿದ್ದರಿಂದ ಸಿಪಿಎಂ ಕಾರ್ಯಕರ್ತರು ಆಕ್ರೋಶಗೊಂಡರು.
ಬಳಿಕ ಇದು ಸಂಘರ್ಷಕ್ಕೆ ಕಾರಣವಾಯಿತು. ಸ್ಥಳಕ್ಕೆ ಆಗಮಿಸಿದ ಪೋಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.