HEALTH TIPS

ವೈದ್ಯಕೀಯ, ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಾಗಿ ತರಬೇತಿ-ಅರ್ಜಿ ಆಹ್ವಾನ

               ಕಾಸರಗೋಡು: ಮಾರ್ಚ್ 2024 ರ ಪ್ಲಸ್ ಟು ಪಬ್ಲಿಕ್ ಪರೀಕ್ಷೆಯಲ್ಲಿ ಪ್ಲಸ್ ಟು ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಕಾಸರಗೋಡು ಜಿಲ್ಲೆಯ ಬುಡಕಟ್ಟು ಅಭಿವೃದ್ಧಿ ಕಛೇರಿ ಅಧೀನದಲ್ಲಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ದೀರ್ಘಾವಧಿಯ ಪ್ರವೇಶ ಪರೀಕ್ಷಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

            2024 ರಲ್ಲಿ, ಪ್ಲಸ್ ಟು ಕೋರ್ಸ್‍ಗೆ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುತ್ತದೆ. ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಕಾಸರಗೋಡು, ಎಣ್ಮಕಜೆ ಮತ್ತು ನೀಲೇಶ್ವರದ ಪರಿಶಿಷ್ಟ ವರ್ಗ ವಿಸ್ತರಣಾ ಕಛೇರಿಗಳಲ್ಲಿ ಜುಲೈ 15, 2024 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994-255466)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries