ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯ ಪ್ರಾಂತ್ಯದಲ್ಲಿ 28 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯ ಪ್ರಾಂತ್ಯದಲ್ಲಿ 28 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಇದು 'ಉದ್ದೇಶಪೂರ್ವಕ ಕೊಲೆ' ಎಂದು ಶಂಕಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ ಸರ್‍ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯುವರಾಜ್ ಗೋಯಲ್ ಎಂದು ಗುರುತಿಸಲಾಗಿದೆ. ಯುವರಾಜ್ ಅವರು ಕಾರ್ ಡೀಲರ್‌ಶಿಪ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇವರ ಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾಗುವ ಮುನ್ನ ಯುವರಾಜ್, ಭಾರತದಲ್ಲಿರುವ ತನ್ನ ತಾಯಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದ. ಎಂದಿನಂತೆ ಜಿಮ್ ಮುಗಿಸಿ ಮನೆಗೆ ಮರಳುವಾಗ ಕಾರಿನಿಂದ ಇಳಿದ ಕೂಡಲೇ ಹತ್ಯೆ ಮಾಡಲಾಗಿದೆ ಎಂದು ಅವರ ಸಹೋದರ ತಿಳಿಸಿದ್ದಾರೆ.