ಕಾಸರಗೋಡು: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಬೆಳಿಗ್ಗೆ 9ಕ್ಕೆ ಕೇಂದ್ರೀಯ ವಿದ್ಯಾಲಯ 2 ರಲ್ಲಿ ಆಚರಿಸಲಾಗುವುದು. ಕಾಸರಗೋಡು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಯೋಗ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರೀಯ ವಿದ್ಯಾಲಯ ಪ್ರಾಂಶುಪಾಲ ಬಿನೋಜ್ ಬೋಸ್ ಅಧ್ಯಕ್ಷತೆ ವಹಿಸುವರು. ಕಾಸರಗೋಡು ನೆಹರು ಯುವ ಕೇಂದ್ರ ಹಾಗೂ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಜಂಟಿಯಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಿದೆ.