HEALTH TIPS

ನೀಟ್‌-ಯುಜಿ: ಅಕ್ರಮ ಆರೋಪ: ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್ ನೋಟಿಸ್‌

         ದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೀಟ್‌-ಯುಜಿಯಲ್ಲಿನ ಇತರ ಅಕ್ರಮ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಮೇರೆಗೆ ಕೇಂದ್ರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದ್ದು, ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

           ಹಿತನ್ ಸಿಂಗ್ ಕಶ್ಯಪ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ರಜಾಕಾಲದ ಪೀಠವು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಬಿಹಾರ ಸರ್ಕಾರದಿಂದ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಕೇಳಿದೆ.

1,563 ಅಭ್ಯರ್ಥಿಗಳ ಕೃಪಾಂಕ ರದ್ದು:

           'ನೀಟ್‌-ಯುಜಿ'ಯಲ್ಲಿ ಪರೀಕ್ಷಾ ಸಮಯ ನಷ್ಟಕ್ಕಾಗಿ 1,563 ಅಭ್ಯರ್ಥಿಗಳಿಗೆ ಪರಿಹಾರಾತ್ಮಕವಾಗಿ ನೀಡಲಾಗಿದ್ದ ಕೃಪಾಂಕವನ್ನು ಹಿಂಪಡೆಯುವುದಾಗಿ ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ( ಎನ್‌ಟಿಎ ) ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಈ ಅಭ್ಯರ್ಥಿಗಳಿಗೆ ಇದೇ 23ರಂದು ಮರುಪರೀಕ್ಷೆ ನಡೆಸಿ, ಇದೇ 30ರಂದು ಫಲಿತಾಂಶ ಪ್ರಕಟಿಸಲಾಗುವುದು. ನಿಗದಿಯಂತೆ ಜುಲೈ 6ರಿಂದ ಎಂಬಿಬಿಎಸ್‌, ಬಿಡಿಎಸ್‌ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕೆ ಕೌನ್ಸೆಲಿಂಗ್‌ ಆರಂಭವಾಗಲಿದೆ ಎಂದು ಕೇಂದ್ರ ತಿಳಿಸಿತ್ತು.

         ಮರು ಪರೀಕ್ಷೆ ತೆಗೆದುಕೊಳ್ಳಲು ಬಯಸದ ಅಭ್ಯರ್ಥಿಗಳಿಗೆ, ಅವರು ಮೇ 5ರ ಪರೀಕ್ಷೆಯಲ್ಲಿ ಪಡೆದಿರುವ ನೈಜ ಅಂಕಗಳನ್ನು (ಕೃಪಾಂಕ ಬಿಟ್ಟು) ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

     ಪ್ರಕರಣದ ಹಿನ್ನೆಲೆ:

            ಮೇ 5ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ನಡೆದಿತ್ತು. ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್‌ 14ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ಎನ್‌ಟಿಎ ಜೂನ್‌ 5ರಂದೇ ಫಲಿತಾಂಶ ಪ್ರಕಟಿಸಿತ್ತು.

          ಹರಿಯಾಣದ ಫರೀದಾಬಾದ್‌ನ ಕೇಂದ್ರದ ಆರು ಮಂದಿ ಸೇರಿ, ದೇಶದಾದ್ಯಂತ 67 ಅಭ್ಯರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದು ಅಗ್ರ ಸ್ಥಾನ ಹಂಚಿಕೊಂಡಿದ್ದರು. ಕೆಲ ಅಭ್ಯರ್ಥಿಗಳಿಗೆ ಕೃಪಾಂಕವನ್ನು ಎನ್‌ಟಿಎ ನೀಡಿದ್ದು ಮತ್ತು ಒಂದೇ ಕೇಂದ್ರದ ಕೆಲವರು ಗರಿಷ್ಠ ಅಂಕಗಳನ್ನು ಗಳಿಸಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

           ಹೀಗಾಗಿ ನೀಟ್‌ ಪರೀಕ್ಷಾ ಅಕ್ರಮ ಮತ್ತು ಫಲಿತಾಂಶದಲ್ಲಿನ ದೋಷಗಳನ್ನು ವಿರೋಧಿಸಿ ದೇಶದ ವಿವಿಧೆಡೆ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಈ ಕುರಿತು ಕೆಲವರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries