HEALTH TIPS

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ ವಿಶೇಷ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಇಂದು ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು, ಅರವಿಂದ್ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.

ಜಾಮೀನು ಬಾಂಡ್‌ಗಳನ್ನು ಸ್ವೀಕರಿಸಲು ತನಿಖಾ ಸಂಸ್ಥೆಗೆ 48 ಗಂಟೆಗಳ ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries