ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ದಾಳಿ ನಡೆಸಿರುವ ಭಯೋತ್ಪಾದಕರ ರೇಖಾ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಿದ್ದಾರೆ.
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ದಾಳಿ ನಡೆಸಿರುವ ಭಯೋತ್ಪಾದಕರ ರೇಖಾ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಿದ್ದಾರೆ.
ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರಿ ಪ್ರಮಾಣದ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಸೈದಾ ಸುಖಲ್ ಗ್ರಾಮದಲ್ಲಿ (ಅಂತರರಾಷ್ಟ್ರೀಯ ಗಡಿಯಿಂದ 60 ಕಿ.ಮೀ ದೂರದಲ್ಲಿದೆ) ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳ ವಾಹನಗಳ ಮೇಲೆ ಬುಲೆಟ್ ದಾಳಿಯನ್ನೂ ನಡೆಸಿದರು. ಅದೃಷ್ಟವಶಾತ್ ಇಬ್ಬರು ಹಿರಿಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮತ್ತೊಂದೆಡೆ, ದೋಡಾ ಜಿಲ್ಲೆಯ ಭದರ್ವಾ-ಪಠಾಣ್‌ಕೋಟ್ ಹೆದ್ದಾರಿಯ ಚಟರ್ಗಲ್ಲಾ ಪ್ರದೇಶದ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ರೈಫಲ್ಸ್‌ನ ಐವರು ಯೋದರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದರು.
ಇದೀಗ ನಾಲ್ವರು ಉಗ್ರರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.