ನವದೆಹಲಿ: ದಕ್ಷಿಣ ಭಾರತದಲ್ಲಿ ಮಳೆಯಾಗಿ ವಾತಾವರಣ ಕೂಲ್ ಕೂಲ್ ಆಗಿದ್ದರೆ, ಅತ್ತ ಉತ್ತರ ಭಾರತದಲ್ಲಿ ಬಿಸಿಲಿನ ಝಳ ವಿಪರೀತವಾಗಿ ಏರುತ್ತಿದೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಜನರು ಬಿಸಿಗಾಳಿಯಿಂದ ತತ್ತರಿಸಿಹೋಗುತ್ತಿದ್ದಾರೆ.
ಉತ್ತರ ಭಾರತದಲ್ಲಿ ಬಿಸಿಗಾಳಿ ಮುಂದುವರಿದಿರುವುದರಿಂದ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿ ರಾಜ್ಯಗಳಲ್ಲಿ ಜನರು ಬಳಲಿ ಬೆಂಡಾಗುತ್ತಿದ್ದಾರೆ.
ಅದರಲ್ಲೂ ದೆಹಲಿಯಲ್ಲಿ ಬಿಸಿಲಿನ ಝಳಕ್ಕೆ ಜನ ಪರದಾಡುತ್ತಿದ್ದಾರೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ ಆಯಾ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ .
ಈಗಾಗಲೇ ಹಲವು ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ದಾಟಿದೆ. ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ಝಳದಿಂದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ.