ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿರುವ ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ನದಿ ದಾಟುತ್ತಿರುವಾಗ ಭದ್ರತಾ ಸಿಬ್ಬಂದಿ ಇದ್ದ ಟ್ಯಾಂಕ್ ಮುಳುಗಿದ್ದು ಐವರು ಯೋಧರು ಮೃತಪಟ್ಟಿದ್ದಾರೆ.
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿರುವ ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ನದಿ ದಾಟುತ್ತಿರುವಾಗ ಭದ್ರತಾ ಸಿಬ್ಬಂದಿ ಇದ್ದ ಟ್ಯಾಂಕ್ ಮುಳುಗಿದ್ದು ಐವರು ಯೋಧರು ಮೃತಪಟ್ಟಿದ್ದಾರೆ.
ಈ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ಓರ್ವ ಸೈನಿಕನ ಮೃತದೇಹ ಪತ್ತೆಯಾಗಿದೆ.
ನದಿ ದಾಟುತ್ತಿರುವಾಗ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಟ್ಯಾಂಕ್ ಮುಳುಗಿತು. ಇದರಲ್ಲಿ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಇದ್ದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಯೋಧರು ತರಬೇತಿಯ ಭಾಗವಾಗಿ ಬೋಧಿ ನದಿಯನ್ನು ತಮ್ಮ ಟ್ಯಾಂಕ್‌ನಲ್ಲಿ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.