ನವದೆಹಲಿ: ಅಧಿಕ ತಾಪಮಾನ ಹಾಗೂ ಬಿಸಿ ಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಭಾಗಗಳಲ್ಲಿ ಗುರುವಾರ ಬೆಳಗ್ಗೆ ವ್ಯಾಪಕ ಮಳೆಯಾಗಿದೆ.
ನವದೆಹಲಿ: ಅಧಿಕ ತಾಪಮಾನ ಹಾಗೂ ಬಿಸಿ ಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಭಾಗಗಳಲ್ಲಿ ಗುರುವಾರ ಬೆಳಗ್ಗೆ ವ್ಯಾಪಕ ಮಳೆಯಾಗಿದೆ.
ಅಧಿಕ ತಾಪಮಾನದ ಪರಿಣಾಮ ಈ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸರಿತಾ ವಿಹಾರ್, ಆರ್‌ಕೆ ಪುರಂ, ಮುನಿಕೀರಾ ಹಾಗೂ ರಾವ್ ತುಲರಾಂ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ.
ದೆಹಲಿಯ ಹಲವೆಡೆ ಇಂದು ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಸಹಿತ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದ ನಿವಾಸಿಗಳು ಮನೆಯೊಳಗೆ ಇರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಹಾಗೂ ಮಳೆ ಬೀಳುವ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದಿರುವಂತೆ ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.