ಕಣ್ಣೂರು: ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾಣಿ ಬಲಿ ನಡೆದಿದೆ ಎಂಬ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಭಕ್ತರಲ್ಲಿ ಆತಂಕ ಮೂಡಿಸಿದೆ ಎಂದು ದೇವಸ್ಥಾನದ ಅರ್ಚಕ ತಿಳಿಸಿದ್ದಾರೆ.
ಕಣ್ಣೂರು: ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾಣಿ ಬಲಿ ನಡೆದಿದೆ ಎಂಬ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಭಕ್ತರಲ್ಲಿ ಆತಂಕ ಮೂಡಿಸಿದೆ ಎಂದು ದೇವಸ್ಥಾನದ ಅರ್ಚಕ ತಿಳಿಸಿದ್ದಾರೆ.
ಪ್ರಾಣಿಗಳ ಬಲಿಯನ್ನು ಒಳಗೊಳ್ಳುವ 'ಶತ್ರು ಭೈರವಿ ಯಾಗ' ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆದಿಲ್ಲ.
ಈ ಕುರಿತು ಭಾನುವಾರ ಪ್ರತಿಕ್ರಿಯಿಸಿದ ರಾಜರಾಜೇಶ್ವರಿ ದೇವಸ್ಥಾನದ ಮುಖ್ಯ ಅರ್ಚಕ ಇ.ಪಿ. ಕುಬೇರನ್ ನಂಬೂದಿರಿಪಾದ್, 'ಡಿ.ಕೆ.ಶಿವಕುಮಾರ್ ಹೇಳಿರುವಂತೆ ದೇವಸ್ಥಾನದಲ್ಲಿ ಏನಾದರೂ ನಡೆದಿದೆಯೇ ಎಂದು ಹಲವು ಭಕ್ತರು ಪ್ರಶ್ನಿಸುತ್ತಿದ್ದಾರೆ. ಅನಗತ್ಯ ವಿವಾದದಿಂದಾಗಿ ಇಂತಹ ಪರಿಸ್ಥಿತಿ ಉದ್ಭವವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
'ಈ ವಿಚಾರವು ಭಕ್ತರಲ್ಲಿ ಆತಂಕ ಹುಟ್ಟಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ, ದೇವಸ್ಥಾನದ ಹೆಸರಿಗೆ ಹಾನಿ ಉಂಟಾಗುವ ಪರಿಸ್ಥಿತಿ ಎದುರಾಗಲಿದೆ' ಎಂದು ಹೇಳಿದ್ದಾರೆ.