ನವದೆಹಲಿ: ಈ ಬಾರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕಾರಕ್ಕೆ ಏರುತ್ತಿರುವುದು ಎನ್‌ಡಿಎ ಸರ್ಕಾರವೇ ಹೊರತು ಮೋದಿ ಸರ್ಕಾರವಲ್ಲ ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಪಾಲ್ಗೊಳ್ಳುವುದಿಲ್ಲ' ಎಂದು ತಿಳಿಸಿದ್ದಾರೆ.
ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಏರುತ್ತಿರುವುದರಿಂದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಬೇಕಿದೆ. ಯುವಜನತೆಯ ದೊಡ್ಡ ಸಮಸ್ಯೆಯಾಗಿ ಉಲ್ಬಣಗೊಳ್ಳುತ್ತಿರುವ ನಿರುದ್ಯೋಗವನ್ನು ಶಮನ ಮಾಡಬೇಕಿದೆ. ಸಮಾಜದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಶ್ರಮಿಸಬೇಕಿದೆ ಎಂದು ಝಾ ಹೇಳಿದ್ದಾರೆ.
ಈ ಬಾರಿ ಜನತಾ ದಳ (ಯುನೈಟೆಡ್ ) ಕಿಂಗ್ ಮೇಕರ್ ಆಗಿರುವುದರಿಂದ ಬಿಹಾರದ ದೀರ್ಘಕಾಲದ ಬೇಡಿಕೆಗಳು ಈಡೇರಲಿದೆ. ವಿಶೇಷ ಸ್ಥಾನಮಾನ ಲಭಿಸಲಿದೆ ಎಂದು ಝಾ ತಿಳಿಸಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ಇಂಡಿಯಾ ಮೈತ್ರಿಕೂಟದ ವಿರುದ್ಧ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.