ಇಂಫಾಲ್: ಕಳೆದೊಂದು ವರ್ಷದಿಂದ ವ್ಯಾಪಕ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಇದೀಗ ಮತ್ತೊಮ್ಮೆ ಕುಕಿ ಮತ್ತು ಮೈಥೇಯಿ ಸಮುದಾಯಗಳ ಜನರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಇಂಫಾಲ್: ಕಳೆದೊಂದು ವರ್ಷದಿಂದ ವ್ಯಾಪಕ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಇದೀಗ ಮತ್ತೊಮ್ಮೆ ಕುಕಿ ಮತ್ತು ಮೈಥೇಯಿ ಸಮುದಾಯಗಳ ಜನರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯ ಥಮ್ನಾಪೋಪ್ಕಿ ಹಾಗೂ ಲಾಮ್‌ಲಾಯಿ ಪ್ರದೇಶಗಳನ್ನು ಗುರಿಯಾಗಿಸಿ ನೆರೆಯ ಜಿಲ್ಲೆ ಕಾಂಗ್‌ಪೋಪ್ಕಿ ಜಿಲ್ಲೆಯ ಬೆಟ್ಟಗಳ ಮೇಲಿಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
'ಸದ್ಯ ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.