ಕೋಲ್ಕತ್ತ: ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಪರಿಸ್ಥಿತಿ ಅವಲೋಕಿಸಿದ್ದಾರೆ.
ಕೋಲ್ಕತ್ತ: ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಪರಿಸ್ಥಿತಿ ಅವಲೋಕಿಸಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಹೋಗುವ ದಾರಿ ಕಿರಿದಾಗಿದ್ದು, ಬೈಕ್‌ನ ಹಿಂದೆ ಕೂತು ಅಶ್ವಿನಿ ವೈಷ್ಣವ್ ಘಟನಾ ಸ್ಥಳ ತಲುಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ರೈಲ್ವೆ ಮಂಡಳಿಯ ಅಧಿಕಾರಿಗಳು ಸಿಗ್ನಲ್‌ನಲ್ಲಿಯ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರಬಹುದು ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಕಂಡುಕೊಂಡಿದ್ದಾರೆ.
ಈ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.