HEALTH TIPS

ಒಡಿಶಾದ ನೂತನ ಮುಖ್ಯಮಂತ್ರಿ ಆಗಿ ಮೋಹನ್ ಚರಣ್ ಮಾಝಿ ಆಯ್ಕೆ

         ಭುವನೇಶ್ವರ: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರು ಆಯ್ಕೆಯಾಗಿದ್ದು, ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

              ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಪಕ್ಷದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಆಯ್ಕೆ ಅವಿರೋಧವಾಗಿ ನಡೆಯಿತು' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಇಲ್ಲಿ ಪ್ರಕಟಿಸಿದರು.

            ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ಭೂಪೇಂದರ್ ಯಾದವ್‌ ಅವರು ವೀಕ್ಷಕರಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು. ಆಯ್ಕೆ ಕುರಿತು ಸಿಂಗ್ ಅವರು 'ಎಕ್ಸ್'ನಲ್ಲೂ ಪೋಸ್ಟ್ ಮಾಡಿದ್ದಾರೆ.


            ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ಇಲ್ಲಿನ ಜನತಾ ಮೈದಾನದಲ್ಲಿ ಬುಧವಾರ ನಡೆಯಲಿದೆ.

         52 ವರ್ಷದ ಮಾಝಿ ಅವರು ಕಿಯೊನಿಹರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದು, ಬಿಜೆಡಿ ಪಕ್ಷದ ಮಿನಾ ಮಾಝಿ ಅವರ ವಿರುದ್ಧ 11,577 ಮತಗಳ ಅಂತರದಿಂದ ಜಯಗಳಿಸಿದ್ದರು.

ಡಿಸಿಎಂಗಳಾಗಿ ಆಯ್ಕೆಯಾಗಿರುವ ಕೆ.ವಿ.ಸಿಂಗ್‌ ದೇವ್ ಅವರು ಪಟ್ನಾಗರ್ ಕ್ಷೇತ್ರದಿಂದ ಬಿಜೆಡಿಯ ಸರೋಜ್‌ ಕುಮಾರ್ ಮೆಹ್‌ ವಿರುದ್ಧ 1,357 ಮತಗಳಿಂದ ಜಯಗಳಿಸಿದ್ದರು. ಪ್ರವತಿ ಪರಿದಾ ಅವರು ನಿಮಪರ ಕ್ಷೇತ್ರದಿಂದ ಬಿಜೆಡಿಯ ದಿಲೀಪ್‌ ಕುಮಾರ್ ನಾಯಕ್ ವಿರುದ್ಧ 4,588 ಮತಗಳಿಂದ ಆಯ್ಕೆಯಾಗಿದ್ದಾರೆ.

              ಪ್ರಧಾನಿ ಭಾಗಿ: ಪಕ್ಷದ ಮೂಲಗಳ ಪ್ರಕಾರ, ಬುಧವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಇತರೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

               147 ಸದಸ್ಯ ಬಲದ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳಿಸಲಷ್ಟೇ ಶಕ್ತವಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries