ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ ನಡೆಯುತ್ತಿದೆ ಎಂಬ ಆರೋಪದ ಕುರಿತು ಪರಿಶೀಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿಲಾಗಿದೆ.
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ ನಡೆಯುತ್ತಿದೆ ಎಂಬ ಆರೋಪದ ಕುರಿತು ಪರಿಶೀಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿಲಾಗಿದೆ.
ಟಿಎಂಸಿ ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ಹಿಂಸಾಚಾರದ ಕುರಿತು ಮೌನ ವಹಿಸಿದ್ದಾರೆ.
ಸಮಿತಿಯಲ್ಲಿ ಬಿಪ್ಲಬ್ ಕುಮಾರ್ ದೇವ್, ರವಿಶಂಕರ್ ಪ್ರಸಾದ್, ಬ್ರಿಜ್ ಲಾಲ್ ಮತ್ತು ಕವಿತಾ ಪಾಟಿದಾರ್ ಇದ್ದಾರೆ.
ಕಲ್ಕತ್ತಾ ಹೈಕೋರ್ಟ್ ಈ ಎಲ್ಲಾ ಬೆಳವಣಿಗೆಳನ್ನು ಗಮನಿಸಿ ರಾಜ್ಯದಲ್ಲಿ ಸಿಎಪಿಎಫ್ ಪಡೆಯನ್ನು ಜೂನ್ 21ರವರೆಗೆ ನಿಯೋಜಿಸಿದೆ. ದೇಶದಾದ್ಯಂತ ಲೋಕಸಭಾ ಚುನಾವಣೆ ನಡೆದಿದ್ದು ಎಲ್ಲಿಯೂ ರಾಜಕೀಯ ಹಿಂಸಾಚಾರ ನಡೆದಿರುವ ಬಗ್ಗೆ ನಿದರ್ಶನವಿಲ್ಲ ಎಂದು ಬಿಜೆಪಿ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮುಂದುವರಿದಿದೆ. ಈ ಹಿಂದೆಯೂ 2021ರ ವಿಧಾನಸಭಾ ಚುನಾವಣೆ ನಡೆದ ಬಳಿಕವೂ ಹಿಂಸಾಚಾರ ನಡೆದಿತ್ತು ಎಂದು ಬಿಜೆಪಿ ತಿಳಿಸಿದೆ.