ಚೆನ್ನೈ: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಫೋಟೊ ಇಟ್ಟು ಮೇಕೆ ಕಡಿದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಮಿಳುನಾಡು ಬಿಜೆಪಿಯು ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಚೆನ್ನೈ: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಫೋಟೊ ಇಟ್ಟು ಮೇಕೆ ಕಡಿದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಮಿಳುನಾಡು ಬಿಜೆಪಿಯು ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ವಿಡಿಯೊದ ಸತ್ಯಾಸತ್ಯತೆ ಖಚಿತಪಟ್ಟಿಲ್ಲ.
ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷ ಮತ್ತು ಪಕ್ಷದ ವಕ್ತಾರ ನಾರಾಯಣನ್ ತಿರುಪತಿ ಅವರು ಈ ವಿಡಿಯೊವನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದು, 'ಅಣ್ಣಾಮಲೈ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಮೇಕೆಯೊಂದನ್ನು ರಸ್ತೆಯ ಮಧ್ಯದಲ್ಲೇ ಕಡಿದು ಹಾಕಿರುವ ಘಟನೆಯು ತಮಿಳುನಾಡಿನಲ್ಲಿ ಬಿಜೆಪಿ ಸಾಧಿಸಿರುವ ಬೆಳವಣಿಗೆಯು ಇತರ ಪಕ್ಷಗಳಿಗೆ ಎಷ್ಟರಮಟ್ಟಿಗೆ ಭಯ ಮೂಡಿಸಿದೆ ಎಂಬುದನ್ನು ತೋರಿಸಿಕೊಟ್ಟಿದೆ' ಎಂದು ಬರೆದುಕೊಂಡಿದ್ದಾರೆ.
'ಚಿಕ್ಕ ಮಕ್ಕಳನ್ನು ಕೂಡಾ ಅಣ್ಣಾಮಲೈ ವಿರುದ್ಧ ಘೋಷಣೆ ಕೂಗುವಂತೆ ಮಾಡಿರುವುದು ವಿಡಿಯೊದಲ್ಲಿ ಕೇಳಬಹುದು. ಮಕ್ಕಳಲ್ಲಿ ದ್ವೇಷವನ್ನು ಪ್ರಚೋದಿಸುವುದು ಖಂಡನೀಯ. ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.