ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ದೃಢಕಲಶಾಭಿಷೇಕ ಜರಗಿತು. ಮಂಗಳವಾರ ಸಂಜೆ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ ನಡೆಯಿತು.
ಬುಧವಾರ ಬೆಳಗ್ಗೆ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಗಣಪತಿಹೋಮ, ದೃಢಕಲಶ ಪೂಜೆ, ಶ್ರೀ ಅನ್ನಪೂರ್ಣೇಶ್ವರೀ ದೇವಿ, ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳು ಮತ್ತು ಶ್ರೀ ಶಂಕರನಾರಾಯಣ ದೇವರಿಗೆ ದೃಢಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆಗೈದ ಕುಮಾರಿ ಅನ್ವಿತಾ ತಲ್ಪಣಾಜೆ ಅವರಿಂದ ಭಕ್ತಿಗೀತೆ ಕಾರ್ಯಕ್ರಮ ಜರಗಿತು. 2024 ಏಪ್ರಿಲ್ 21ರಿಂದ ಏ.30ರ ತನಕ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ಜರಗಿತ್ತು.