HEALTH TIPS

ಪ್ರಶ್ನೆ ಪತ್ರಿಕೆ ಸೋರಿಕೆ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ರಾಷ್ಟ್ರಪತಿ ಮುರ್ಮು

        ವದೆಹಲಿ: ಇತ್ತೀಚೆಗೆ ನಡೆದ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣಗಳ ತನಿಖೆ ನಡೆಯುತ್ತಿದೆ. ನ್ಯಾಯಯುತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

          ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು ಗುರುವಾರ ಮಾತನಾಡಿದರು.

           ದೇಶದ ಯುವಕರು ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ನನಸು ಮಾಡಿಕೊಳ್ಳುವ ವಾತಾವರಣವನ್ನು ಸೃಷ್ಟಿಸಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಕೈಗೊಂಡ ಕ್ರಮಗಳನ್ನು ಪ್ರಸ್ತಾಪಿಸುತ್ತಿದ್ದಂತೆ, ಕೆಲವು ವಿರೋಧ ಪಕ್ಷದ ಸದಸ್ಯರು 'ನೀಟ್' ಎಂದು ಕೂಗಿದರು.

              ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಡಚಣೆ ಉಂಟಾಗಬಾರದು. ಸರ್ಕಾರಿ ನೇಮಕಾತಿ ಮತ್ತು ಪರೀಕ್ಷೆಗಳಲ್ಲಿ ಪಾರದರ್ಶಕತೆ ಅತ್ಯಗತ್ಯ ಎಂದು ಅವರು ಹೇಳಿದರು.

              ಈ ಹಿಂದೆಯೂ ಕೆಲವು ರಾಜ್ಯಗಳಲ್ಲಿ ಪ್ರಶ್ನೆ ಪ್ರತಿಕೆ ಸೋರಿಕೆಯ ಘಟನೆಗಳು ನಡೆದಿವೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಷ್ಟ್ರಮಟ್ಟದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆಗಳನ್ನು ತರಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುರ್ಮು ಪ್ರತಿಪಾದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries