ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಆರಂಭದ ದಿನವನ್ನು ಶಾಲಾ ಪ್ರವೇಶೋತ್ಸವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಉದ್ಘಾಟಿಸಿದ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವದ ಪ್ರಸಾರವನ್ನು ಮಾಡಲಾಯಿತು.
ಬಳಿಕ ಶಾಲಾ ಮಟ್ಟದ ಪ್ರವೇಶೋತ್ಸವವನ್ನು ವಾರ್ಡ್ ಸದಸ್ಯ ಜನಾರ್ಧನ ಪೂಜಾರಿ ಕುಳೂರುರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೀಂಜ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ ಉಪಸ್ಥಿತರಿದ್ದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನಾರಾಯಣ ನಾೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿ ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ ಹಾಗೂ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ನವಾಗತ ಮಕ್ಕಳಿಗೆ ವಿವಿಧ ಕೊಡುಗೆಗಳ ವಿತರಣೆ ನಡೆಯಿತು. ಪ್ರೀ ಪ್ರೈಮರಿ ಮಕ್ಕಳ ಸಮವಸ್ತ್ರವನ್ನು ಕೊಡುಗೆ ನೀಡಿದ ಗುಬ್ಯ ಶ್ರೀಧರ ಶೆಟ್ಟಿ, ಪಠ್ಯಪುಸ್ತಕವನ್ನು ಕೊಡುಗೆ ನೀಡಿದ ವಿನಯ ಸೌಜನ್ ಹಾಗೂ ಪ್ರೀ ಪ್ರೈಮರಿ ಮತ್ತು ಒಂದನೇ ತರಗತಿ ಮಕ್ಕಳಿಗೆ ಬ್ಯಾಗ್ ಕೊಡುಗೆ ನೀಡಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣರವರಿಗೆ ಶಾಲಾ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.
ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಂ ವಂದಿಸಿದರು. ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ನಡೆದ ರಕ್ಷಕರ ತರಬೇತಿಯನ್ನು ಶಿಕ್ಷಕಿ ಸೌಮ್ಯ ಪಿ ನಡೆಸಿಕೊಟ್ಟರು. ಶಾಲಾ ಶಿಕ್ಷಕಿಯರಾದ ಶ್ವೇತ ಇ, ಆಯಿಶತ್ ಸೈದ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ್ ಶೆಟ್ಟಿ ಎಲಿಯಾಣ, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಹರಿರಾಮ ಕುಳೂರು, ಚಂದ್ರಹಾಸ ಪೂಜಾರಿ ಕುಳೂರು, ವಸಂತ ಪೂಜಾರಿ ಕುಳೂರು ಹಾಗೂ ರಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು. ಬಳಿಕ ಸಿಹಿತಿಂಡಿ ಹಾಗೂ ಮಧ್ಯಾಹ್ನದೂಟ ವಿತರಿಸಲಾಯಿತು.