ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಶಹಾಪುರದ ಒಂಬತ್ತು ವರ್ಷದ ಬಾಲಕನಿಗೆ ಸರ್ಕಾರಿ ಆಸ್ಪತ್ರೆ ವೈದ್ಯರು ಕಾಲಿನ ಗಾಯಕ್ಕೆ ಬದಲಾಗಿ ಆತನ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಶಹಾಪುರದ ಒಂಬತ್ತು ವರ್ಷದ ಬಾಲಕನಿಗೆ ಸರ್ಕಾರಿ ಆಸ್ಪತ್ರೆ ವೈದ್ಯರು ಕಾಲಿನ ಗಾಯಕ್ಕೆ ಬದಲಾಗಿ ಆತನ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
'ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಾಲಿಗೆ ಗಾಯವಾಗಿತ್ತು.
ಬಾಲಕನ ಪೋಷಕರು ಶಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದಾಗ್ಯೂ ಬಾಲಕನ ಪೋಷಕರ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ. ಕೈಲಾಸ್ ಪವಾರ್ ಹೇಳಿದ್ದಾರೆ.
'ಬಾಲಕನು ಕಾಲಿನ ಗಾಯದ ಹೊರತಾಗಿ ಫೀಮೊಸಿಸ್ ತೊಂದರೆಯಿಂದ ಕೂಡ ಬಳಲುತ್ತಿದ್ದ. ಹಾಗಾಗಿ ನಾವು ಎರಡೂ ಶಸ್ತ್ರಚಿಕಿತ್ಸೆ ಮಾಡಿದ್ದೇವೆ' ಎಂದು ಆಸ್ಪತ್ರೆಯ ಆರೋಗ್ಯ ಅಧಿಕಾರಿ ಗಜೇಂದ್ರ ಪವಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.