ಮುಂಬೈ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಜನರನ್ನು ದಕ್ಷಿಣ ಕೊರಿಯಾಕ್ಕೆ ಕಳುಹಿಸುತ್ತಿದ್ದ ಆರೋಪದ ಮೇಲೆ ನೌಕಪಡೆಯ ಅಧಿಕಾರಿ ಲೆಫ್ಟಿನೆಂಟ್ ಸಿಡಿಆರ್ ವಿಪಿನ್ ಕುಮಾರ್ ಡಾಗರ್ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಡಾಗರ್, ನಕಲಿ ದಾಖಲೆಗಳನ್ನು ಸೃಷ್ಟಿಸಿ ಜನರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸುವ ಗ್ಯಾಂಗ್‌ನ ಸದಸ್ಯನೂ ಆಗಿರಬಹುದು ಎಂದು ಶಂಕಿಸಲಾಗಿದೆ.
ಪ್ರತಿ ದಾಖಲೆಗೆ ₹10 ಲಕ್ಷದವರೆಗೆ ವಸೂಲಿ ಮಾಡಿ 8ರಿಂದ 10 ಜನರನ್ನು ದಕ್ಷಿಣ ಕೊರಿಯಾಕ್ಕೆ ಕಳುಹಿಸಿದ್ದಾಗಿ ಆತನ ಸಹಚರರು ತಪ್ಪೊಪ್ಪಿಕೊಂಡಿದ್ದಾರೆ. ಹರಿಯಾಣದ ಮೂಲದವರಾದ ಡಾಗರ್, ವಾಯುಪಡೆಯ ಅಧಿಕಾರಿಯ ಮಗ ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಗರ್‌ನನ್ನು ಜುಲೈ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಹೇಳಿದರು.