ತಿರುವನಂತಪುರಂ: ಕೆಎಸ್‍ಆರ್‍ಟಿಸಿ ನೌಕರರಿಗೆ ಒಂದೇ ಬಾರಿಗೆ ಪೂರ್ಣ ವೇತನ ನೀಡಲು ಸರ್ಕಾರ ಸಹಾಯ ಮಾಡಲಿದೆ. ಕೆಎಸ್‍ಆರ್‍ಟಿಸಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೆಎಸ್‍ಆರ್‍ಟಿಸಿ ಮಾಸಿಕ ವೇತನವನ್ನು ಒಟ್ಟು ಮೊತ್ತದಲ್ಲಿ ಪಾವತಿಸಲು ವ್ಯವಸ್ಥೆ ಮಾಡುತ್ತದೆ. ಇದಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್, ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್, ಹಣಕಾಸು ಕಾರ್ಯದರ್ಶಿ ರವೀಂದ್ರಕುಮಾರ್ ಅಗರ್ವಾಲ್, ಕೆಎಸ್ಆರ್ಟಿಸಿ ಎಂಡಿ ಪ್ರಮೋಜ್ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.