ನವದೆಹಲಿ: ಕೇರಳದ ಬಿಜೆಪಿ ಸಂಸದ, ಮಲಯಾಳಂ ನಟ ಸುರೇಶ್ ಗೋಪಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಬಯಸುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ.
ನವದೆಹಲಿ: ಕೇರಳದ ಬಿಜೆಪಿ ಸಂಸದ, ಮಲಯಾಳಂ ನಟ ಸುರೇಶ್ ಗೋಪಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಬಯಸುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ.
ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಸುರೇಶ್ ಗೋಪಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ನಾನು ಮೋದಿ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಊಹಾಪೋಹವಷ್ಟೇ, ಇದು ಸತ್ಯಕ್ಕೆ ದೂರವಾಗಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವುದು ಮತ್ತು ಸಂಸತ್‌ನಲ್ಲಿ ಕೇರಳದ ಜನರನ್ನು ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಷಯ' ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಿಕಟವರ್ತಿ ಎಂದು ಗುರುತಿಸಿಕೊಂಡಿರುವ ಸುರೇಶ್ ಗೋಪಿ ಅವರು ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ವಿರುದ್ಧ 74,686 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಸದ್ಯ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸುರೇಶ್ ಗೋಪಿ ಅವರು ನಾಲ್ಕು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.