HEALTH TIPS

ಕೇರಳ: ಎನ್‌ಟಿಎ ಪರೀಕ್ಷಾ ಅಕ್ರಮ ಖಂಡಿಸಿ ನಿರ್ಣಯ

          ವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ 'ಯುಜಿ-ನೀಟ್‌' ಮತ್ತು 'ಯುಜಿಸಿ-ನೆಟ್‌' ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು.

          ಈ ಪರೀಕ್ಷೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಅಭ್ಯರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ತುರ್ತಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

               ಈ ಪರೀಕ್ಷಾ ಅಕ್ರಮಗಳು ಎನ್‌ಟಿಎ ವಿಶ್ವಾಸಾರ್ಹತೆ ಮತ್ತು ಸಾಮರ್ಥ್ಯವನ್ನು ಪ್ರಶ್ನಿಸುತ್ತವೆ ಎಂದು ಆಡಳಿತಾರೂಢ ಎಲ್‌ಡಿಎಫ್‌ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

                ಎಲ್‌ಡಿಎಫ್‌ ಶಾಸಕ ಎಂ. ವಿಜಿನ್‌ ಅವರು ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries