ಬೆಂಗಳೂರು: ಕರ್ನಾಟಕ ಏಕೀಕರಣದ ಹೋರಾಟಗಾರ, ಹಿರಿಯ ಸಾಹಿತಿ ನಾಡೋಜ ಡಾ.ಕಯ್ಯರ ಕಿಞ್ಞಣ್ಣ ರೈ ಅವರ 109ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಬೆಂಗಳೂರು: ಕರ್ನಾಟಕ ಏಕೀಕರಣದ ಹೋರಾಟಗಾರ, ಹಿರಿಯ ಸಾಹಿತಿ ನಾಡೋಜ ಡಾ.ಕಯ್ಯರ ಕಿಞ್ಞಣ್ಣ ರೈ ಅವರ 109ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ ಧರಣೀದೇವಿ ಮಾಲಗತ್ತಿ, ಕಿಞ್ಞಣ್ಣ ರೈ ಅವರ ಕವನ ಸಂಕಲನಗಳಲ್ಲಿ ಪ್ರಮುಖವಾದ ಶ್ರೀಮುಖ ಐಕ್ಯಗಾನ, ಮಕ್ಕಳ ಸಾಹಿತ್ಯ ಕೃತಿಗಳ ಬಗ್ಗೆ ವಿವರಿಸಿದರು.
ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಜಾಣಗೆರೆ ವೆಂಕಟರಾಮಯ್ಯ, ಅಶೋಕ ಚಂದರಗಿ, ಭಗತ್ ರಾಜ್, ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.