ಕೊಚ್ಚಿ: ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಶಂಕಿತ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಕೊಚ್ಚಿ: ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಶಂಕಿತ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಬೆಳಿಗ್ಗೆ 11.50ಕ್ಕೆ ಹೊರಡಬೇಕಿದ್ದ ಎಐ149 ವಿಮಾನವು ಟೇಕಾಫ್ ಆಗುವ ಮೊದಲು ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು.
ಸದ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಸುಹೈಬ್(29) ಎಂದು ಗುರುತಿಸಲಾಗಿದೆ. ಈತ ಇದೇ ವಿಮಾನದಲ್ಲಿ ಲಂಡನ್‌ಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.