ನವದೆಹಲಿ :ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆ ಲೋಕಾರ್ಪಣೆ ಸಮೀಪಿಸಿದೆ.
ನವದೆಹಲಿ :ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆ ಲೋಕಾರ್ಪಣೆ ಸಮೀಪಿಸಿದೆ.
ಭಾನುವಾರ ಈ ರೈಲ್ವೆ ಸೇತುವೆಯಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ ಕೆಲಸಗಳನ್ನು ಪರಿಶೀಲನೆ ನಡೆಸಿದರು.
ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಎಂಜಿನಿಯರ್‌ಗಳು ಹಾಗೂ ಕಾರ್ಮಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಸೇತುವೆ ಲೋಕಾರ್ಪಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1.3 ಕಿ.ಮೀ ಉದ್ದದ ಸೇತುವೆಯು ನದಿಪಾತ್ರದಿಂದ 359 ಮೀಟರ್ ಎತ್ತರದಲ್ಲಿದೆ. ಅಂದರೆ ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರ ಇರಲಿದೆ. ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕದ ಭಾಗವಾಗಿ ಈ ಸೇತುವೆ ನಿರ್ಮಾಣವಾಗುತ್ತಿದೆ.
ಅತ್ಯಂತ ಸವಾಲಿನ ಕೆಲಸವನ್ನು ಪೂರ್ಣಗೊಳಿಸಿರುವ ಸಿಬ್ಬಂದಿಯನ್ನು ಶ್ಲಾಘಿಸಲಾಗುತ್ತಿದೆ. ಈ ವಿಸ್ಮಯವನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.