ಬದಿಯಡ್ಕ: ಕರ್ನಾಟಕ ಬ್ಯಾಂಕ್ ಸಾಮಾಜಿಕ ಕಳಕಳಿ ನಿ|ಧಿಯಿಂದ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠಕ್ಕೆ ಶಾಲಾ ವಾಹನವನ್ನು ದೇಣಿಗೆಯಾಗಿ ನೀಡಲಾಯಿತು. ಮಂಗಳೂರು ಪ್ರಧಾನಕಛೇರಿಯಲ್ಲಿ ಶಾಲಾ ವ್ಯವಸ್ಥಾಪಕ ಜಯಪ್ರಕಾಶ ಪಜಿಲ ಅವರಿಗೆ ಬ್ಯಾಂಕ್ ಕಾರ್ಯನಿರ್ವಹಣಾ ಅಧಿಕಾರಿ ಶ್ರೀಕೃಷ್ಣನ್ ಹರಿಹರಶರ್ಮ ಅವರು ಕೀಲಿಕೈ ಹಸ್ತಾಂತರಿಸಿ ಶುಭಕೋರಿದರು. ಕರ್ನಾಟಕ ಬ್ಯಾಂಕ್ ನಿರ್ದೇಶಕರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಮಧುಸೂದನ ತಿಮ್ಮಕಜೆ ಜೊತೆಗಿದ್ದರು.