ನವದೆಹಲಿ: ಗುಜರಾತ್ ಗಲಭೆ, ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಗಳಲ್ಲಿ ಬೋಧಿಸುವ ಅಗತ್ಯ ಇಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಹೇಳಿದ್ದಾರೆ.
ನವದೆಹಲಿ: ಗುಜರಾತ್ ಗಲಭೆ, ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಗಳಲ್ಲಿ ಬೋಧಿಸುವ ಅಗತ್ಯ ಇಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಹೇಳಿದ್ದಾರೆ.
ಪಿಟಿಐ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, 'ಪ್ರತಿ ವರ್ಷ ನಡೆಸುವ ಪರಿಷ್ಕರಣೆ ಭಾಗವಾಗಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿದ್ದು, ವಿವಾದ ಎಬ್ಬಿಸುವಂತಹ ವಿಷಯವೇ ಇದಲ್ಲ' ಎಂದಿದ್ದಾರೆ.
ಗಲಭೆಗಳ ಕುರಿತ ಬೋಧನೆಯು ರೋಷಾವೇಶಭರಿತ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ. ಈ ಕಾರಣಕ್ಕಾಗಿಯೇ, ಗುಜರಾತ್ ಗಲಭೆಗಳು, ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಗಳಲ್ಲಿ ಬೋಧಿಸುವ ಅಗತ್ಯ ಇಲ್ಲ' ಎಂದು ಅವರು ಪ್ರತಿಪಾದಿಸಿದ್ದಾರೆ.
ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ ಅವರು, ನಮ್ಮ ಶಿಕ್ಷಣದ ಉದ್ದೇಶ ಹಿಂಸಾತ್ಮಕ ಪ್ರವೃತ್ತಿಯ, ಖಿನ್ನತೆಗೆ ಒಳಗಾದ ನಾಗರಿಕರನ್ನು ಸೃಷ್ಟಿಸುವುದಲ್ಲ. ದ್ವೇಷ ಮತ್ತು ಹಿಂಸೆ ಬೋಧನೆಯ ವಿಷಯಗಳಲ್ಲ. ಅವು ನಮ್ಮ ಪಠ್ಯಪುಸ್ತಕಗಳ ಕೇಂದ್ರಬಿಂದುವಾಗಿರಬಾರದು ಎಂದು ಸಕ್ಲಾನಿ ಹೇಳಿದ್ದಾರೆ.