ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳಿಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ, ಯಕ್ಷಗಾನ ಉಳಿದರೆ ಕನ್ನಡ ಹಾಗೂ ಅಕಾಡೆಮಿ ಉಳಿಯುತ್ತದೆ. ಯಕ್ಷಗಾನ ರಾಜ್ಯದ, ದೇಶದ ಕಲೆಯಾಗಬೇಕು. ಯಕ್ಷಗಾನ, ಮೂಡಲಪಾಯದ ಏಳ್ಗೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ. ಜನರು ಹಾಗೂ ಸರ್ಕಾರ ಇಬ್ಬರೂ ಒಟ್ಟುಗೂಡಿ ಕಲೆ ಉಳಿಸಬೇಕು ಎಂದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಧರಣೀದೇವಿ ಮಾಲಗತ್ತಿ, ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್, ಸಾಹಿತಿಗಳಾದ ಗೊ.ರು.ಚನ್ನಬಸಪ್ಪ, ಡಾ.ಕೆ.ಮರುಳ ಸಿದ್ದಪ್ಪ, ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್. ಎಲ್. ಪುಷ್ಪ ಸೇರಿ ಇತರರು ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ಅಭಿನಂದಿಸಿದರು.