ನವದೆಹಲಿ: ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಬಂಧನವನ್ನು ಮಾಡಿದೆ. ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ನವದೆಹಲಿ: ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಬಂಧನವನ್ನು ಮಾಡಿದೆ. ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಪರೀಕ್ಷೆಗೂ ಮುನ್ನ ಸೋರಿಕೆಯಾದ ಪ್ರಶ್ನೆಪತ್ರಿಕೆ ನೀಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇಲೆ ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ಈವರೆಗೆ 6 ಎಫ್‌ಐಆರ್ ದಾಖಲಿಸಿದೆ.
ದೇಶದ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿರುವ ಎಂಬಿಬಿಎಸ್, ಬಿಡಿಎಸ್, ಆಯುಶ್ ಮತ್ತು ಇತರೆ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನೀಟ್-ಯುಜಿ ಪರೀಕ್ಷೆಗಳನ್ನು ನಡೆಸುತ್ತದೆ.
ಈ ವರ್ಷ ವಿದೇಶದ 14 ಪರೀಕ್ಷಾ ಕೇಂದ್ರಗಳು ಸೇರಿ 571 ನಗರಗಳ 4,750 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ಪರೀಕ್ಷೆ ನಡೆಸಲಾಗಿತ್ತು. 23 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸುವುದಾಗಿ ಶಿಕ್ಷಣ ಸಚಿವಾಲಯ ಘೋಷಿಸಿದ ಬೆನ್ನಲ್ಲೇ ಭಾನುವಾರ(ಜೂ.23) ಮೊದಲ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಸಿಬಿಐ ತನಿಖೆಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಒಂದು ಸಮೂಹ ಒತ್ತಾಯಿಸಿತ್ತು.