ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡದ ದಾಳಿಯ ನಂತರ ಬೊಲೆರೊ ವಾಹನವೊಂದರಲ್ಲಿ ಸಶಸ್ತ್ರಗಳನ್ನು ಸಾಗಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ಸಂಬಂಧ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡದ ದಾಳಿಯ ನಂತರ ಬೊಲೆರೊ ವಾಹನವೊಂದರಲ್ಲಿ ಸಶಸ್ತ್ರಗಳನ್ನು ಸಾಗಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ಸಂಬಂಧ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬರು ಸಶಸ್ತ್ರಗಳನ್ನು ಅನುಮಾನಾಸ್ಪದ ವಾಹನದಲ್ಲಿ ಸಾಗಿಸುತ್ತಿದ್ದರೂ ಭದ್ರತಾ ಪಡೆಯು ತಪಾಸಣೆ ನಡೆಸಿಲ್ಲ ಎಂದು ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊಗಳು ಹರಿದಾಡಿದ್ದವು.
ವಾಹನದಲ್ಲಿ ಸಿಎಪಿಎಫ್ ಸಿಬ್ಬಂದಿಯೇ ಸಶಸ್ತ್ರಗಳನ್ನು ಸಾಗಿಸುತ್ತಿದ್ದರು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಶಸ್ತ್ರಗಳನ್ನು ಸಾಗಿಸುವ ವಾಹನದ ನಂಬರ್ ಪ್ಲೇಟ್ ಅನ್ನು ಮುಚ್ಚಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಭದ್ರತೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರಲ್ಲಿ ಆತಂಕ ಮೂಡಿಸಲಾಗುತ್ತಿದೆ. ಜನರು ಇಂತಹ ವಂದತಿಗಳಿಗೆ ಕಿವಿಕೊಡಬಾರದು ಎಂದು ಪೊಲೀಸರು ಹೇಳಿದ್ದಾರೆ.
ರಿಯಾಸಿ ದಾಳಿಯ ನಂತರ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಚಲನವಲನಗಳ ಬಗ್ಗೆ ಜನರು ಗಮನಹರಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು. 33 ಮಂದಿ ಗಾಯಗೊಂಡಿದ್ದರು.