ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾ ಮಟ್ಟದಲ್ಲಿ ರಸಪ್ರಶ್ನೆ, ಪೋಸ್ಟರ್ ರಚನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಮುಖಾರಿಕಂಡ ಗಿಡ ನೆಡುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಮುಖ್ಯೋಪಾಧ್ಯಾಯ ರಾಜಗೋಪಾಲ, ನೌಕರ ಸಂಘದ ಕಾರ್ಯದಶಿ ಕಿರಣ್ ಕೆ, ಇಕೋ ಕ್ಲಬ್ ನ ಹೇಮಲತ ಎನ್, ಲಿನ್ಸಿ, ಶಾಲಾ ನಾಯಕ ಜೀವನ್ ಕುಮಾರ್ ಉಪಸ್ಥಿತರಿದ್ದರು.